ADVERTISEMENT

'ಈಡಿಗ ಸಂಘದ ಬೈಲಾ ತಿದ್ದುಪಡಿಗೆ ಒಪ್ಪಿಗೆ'

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 16:07 IST
Last Updated 4 ಫೆಬ್ರುವರಿ 2024, 16:07 IST
ಬೆಂಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ ಮತ್ತು  ಆರ್ಯ ಈಡಿಗರ ವಧು–ವರರ ರಾಜ್ಯಮಟ್ಟದ ಸಮಾವೇಶದಲ್ಲಿ ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಮಾತನಾಡಿದರು. ಉಪಾಧ್ಯಕ್ಷರಾದ ರವೀಂದ್ರ ಕುಮಾರ್, ಉಪಾಧ್ಯಕ್ಷ ಟಿ. ಶಿವಕುಮಾರ್, ರಾಜೇಂದ್ರ ಜಾಲಪ್ಪ, ಎಂ.ಕೆ. ಪೋತರಾಜ್‌  ಪಾಲ್ಗೊಂಡಿದ್ದರು
–ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ ಮತ್ತು  ಆರ್ಯ ಈಡಿಗರ ವಧು–ವರರ ರಾಜ್ಯಮಟ್ಟದ ಸಮಾವೇಶದಲ್ಲಿ ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಮಾತನಾಡಿದರು. ಉಪಾಧ್ಯಕ್ಷರಾದ ರವೀಂದ್ರ ಕುಮಾರ್, ಉಪಾಧ್ಯಕ್ಷ ಟಿ. ಶಿವಕುಮಾರ್, ರಾಜೇಂದ್ರ ಜಾಲಪ್ಪ, ಎಂ.ಕೆ. ಪೋತರಾಜ್‌  ಪಾಲ್ಗೊಂಡಿದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ನೆರೆಯ ರಾಜ್ಯಗಳ ಈಡಿಗ ಜನಾಂಗದವರಿಗೆ ಪ್ರದೇಶ ಆರ್ಯ ಈಡಿಗರ ಸಂಘ ಮತ್ತು ಸ್ಥಳೀಯ ಉಪ ಸಂಘಗಳಲ್ಲಿ ಸದಸ್ಯತ್ವ ನೀಡುವುದೂ ಸೇರಿದಂತೆ ಬೈಲಾಗಳಲ್ಲಿ ಕೆಲವು ಬದಲಾವಣೆ ಮಾಡುವ ತಿದ್ದು‍ಪಡಿಗಳಿಗೆ ಪ್ರದೇಶ ಆರ್ಯ ಈಡಿಗರ ಸಂಘದ ಸರ್ವ ಸದಸ್ಯರ ಸಭೆ ಒಪ್ಪಿಗೆ ನೀಡಿದೆ.

ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ರಾಜ್ಯದ ವಿವಿಧ ಭಾಗಗಳಲ್ಲಿ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಮತ್ತು ರಚನೆಯಾಗಲಿರುವ ಈಡಿಗ ಸಂಘಗಳಿಗೆ ಕೇಂದ್ರ ಸಂಘದ ಸದಸ್ಯತ್ವ ನೀಡುವುದು, ಆಜೀವ ಸದಸ್ಯತ್ವ ಶುಲ್ಕವನ್ನು ₹ 1 ಸಾವಿರದಿಂದ ₹ 500ಕ್ಕೆ ಇಳಿಸುವುದು, ವಿಶೇಷ ಆಹ್ವಾನಿತ ಸದಸ್ಯರ ಸಂಖ್ಯೆಯನ್ನು 15ರಿಂದ 25ಕ್ಕೆ ಹೆಚ್ಚಿಸುವ ತಿದ್ದುಪಡಿಗಳಿಗೆ ಸಭೆ ಒಪ್ಪಿಗೆ ನೀಡಿದೆ.

ADVERTISEMENT

ವಧು–ವರರ ಸಮಾವೇಶ: ಸರ್ವ ಸದಸ್ಯರ ಸಭೆಯ ಬಳಿಕ ಈಡಿಗ ವಧು– ವರರ ರಾಜ್ಯ ಮಟ್ಟದ ಸಮಾವೇಶ ನಡೆಯಿತು. 300ಕ್ಕೂ ಹೆಚ್ಚು ವಧು– ವರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.