ADVERTISEMENT

ಪೂರ್ಣ ತರಗತಿ ಇಂದಿನಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 19:30 IST
Last Updated 31 ಜನವರಿ 2021, 19:30 IST
ಪಾಠ ಕೇಳುತ್ತಿರುವ ವಿದ್ಯಾರ್ಥಿನಿಯರು
ಪಾಠ ಕೇಳುತ್ತಿರುವ ವಿದ್ಯಾರ್ಥಿನಿಯರು    

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಪೂರ್ಣ ತರಗತಿ ನಡೆಯಲಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10 ರಿಂದ ಸಂಜೆ 4.30ರವರೆಗೆ, ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ. ಹಾಜರಾತಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ವಿದ್ಯಾರ್ಥಿಗಳು ಮನೆಯಿಂದಲೇ ಮಧ್ಯಾಹ್ನದ ಊಟ ತರಬೇಕು ಎಂದು ಸೂಚಿಸಲಾಗಿದೆ.

6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಹಾಲಿ ವಿದ್ಯಾಗಮ ಕಲಿಕೆ ಕಾರ್ಯಕ್ರಮ ಮುಂದುವರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೇಳಿದೆ.

ADVERTISEMENT

ಎಲ್ಲ ಜಿಲ್ಲಾ ಡಿಡಿಪಿಐ, ಬಿಇಒಗಳು ತಮ್ಮ ವ್ಯಾಪ್ತಿಯ ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.