ADVERTISEMENT

ಜೂನ್‌ 28, 29ಕ್ಕೆ ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 15:18 IST
Last Updated 19 ಜೂನ್ 2025, 15:18 IST
   

ಬೆಂಗಳೂರು: ರೋಟರಾಕ್ಟ್‌ನ ಡಿಸ್ಟ್ರಿಕ್ಟ್ 3192 ಘಟಕವು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಇದೇ 28 ಮತ್ತು 29ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದೆ. 

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಪ್ರತಿನಿಧಿ ನವೀನ್ ಸೆನ್ನಾ, ‘ಈ ಮೇಳಕ್ಕೆ ಉಚಿತ ಪ್ರವೇಶ ಇರಲಿದೆ. 50ಕ್ಕೂ ಅಧಿಕ ವಿದ್ಯಾಸಂಸ್ಥೆ ಮತ್ತು ವಿಶ್ವವಿದ್ಯಾಲಯಗಳು ಹಾಗೂ 100ಕ್ಕೂ ಅಧಿಕ ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ’ ಎಂದು ಮಾಹಿತಿ ನೀಡಿದರು.

‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಪರಿಕರಗಳು ಮೇಳದಲ್ಲಿ ಇರಲಿದ್ದು, ಅಣಕು ಸಂದರ್ಶನ ನಡೆಯಲಿದೆ. ತಜ್ಞರ ಸಮಿತಿಗಳಿಂದ ವೈಯಕ್ತಿಕ ಸಮಾಲೋಚನೆ ಮತ್ತು ವೃತ್ತಿ ಕಾರ್ಯಾಗಾರಗಳನ್ನು ಈ ಮೇಳ ಒಳಗೊಂಡಿರುತ್ತದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.