ADVERTISEMENT

ಅಮೆರಿಕದಲ್ಲಿ ಓದಬಯಸುವ ವಿದ್ಯಾರ್ಥಿಗಳಿಗಾಗಿ ಬೆಂಗಳೂರಲ್ಲಿ ಆ.18ರಂದು ಶಿಕ್ಷಣ ಮೇಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಆಗಸ್ಟ್ 2024, 9:22 IST
Last Updated 12 ಆಗಸ್ಟ್ 2024, 9:22 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ

ಬೆಂಗಳೂರು: ಅಮೆರಿಕದಲ್ಲಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ, ‘EducationUSA’ ಸಂಸ್ಥೆಯು ಬೆಂಗಳೂರು ಸೇರಿದಂತೆ ದೇಶದಾದ್ಯಂತ 8 ಶಿಕ್ಷಣ ಮೇಳಗಳನ್ನು ಆಯೋಜಿಸಿದೆ.

ADVERTISEMENT

ಆಗಸ್ಟ್ 16 ರಂದು ಹೈದರಾಬಾದ್‌ನಲ್ಲಿ ಪ್ರಾರಂಭವಾಗುವ ಈ ಮೇಳವು ಆಗಸ್ಟ್ 25 ರಂದು ದೆಹಲಿಯಲ್ಲಿ ಮುಕ್ತಾಯಗೊಳ್ಳಲಿದೆ.

ಆಗಸ್ಟ್ 18 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ನಗರದ ಎಂ. ಜಿ ರಸ್ತೆಯಲ್ಲಿರುವ ತಾಜ್ ಹೋಟೆಲ್‌ನಲ್ಲಿ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆವರೆಗೆ ಮೇಳ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಮೆರಿಕದಲ್ಲಿ ಪದವಿಪೂರ್ವ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಕಾರ್ಯಕ್ರಮಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು, ಅಲ್ಲಿ ಮಾನ್ಯತೆ ಪಡೆದ 80 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳನ್ನು ಭೇಟಿ ಮಾಡಲು ಅವಕಾಶ ಇರಲಿದೆ. ಪ್ರವೇಶ ಉಚಿತವಾಗಿದ್ದು, ನೋಂದಣಿ ಕಡ್ಡಾಯ.

ಹೆಚ್ಚಿನ ಮಾಹಿತಿಗೆ ಈ ಲಿಂಕ್‌ಗೆ ಭೇಟಿ ನೀಡಿ. https://bit.ly/EdUSAFair24Emb

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.