ಗುರುವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಡಾ.ವಿಜಯಲಕ್ಷ್ಮಿ ದೇಶಮಾನೆ, ಮಧುರಾಣಿ ಗೌಡ, ಸಿ.ಎನ್. ಅಶ್ವತ್ಥನಾರಾಯಣ, ಎಂ.ಜಿ. ಬಾಲಕೃಷ್ಣ, ಟಿ. ತಿಮ್ಮೇಗೌಡ, ಸಿ.ಸೋಮಶೇಖರ್ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ
ಬೆಂಗಳೂರು: ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ಕೊಟ್ಟರೆ ಸದೃಢ ದೇಶ ನಿರ್ಮಿಸಲು ಸಾಧ್ಯ ಎಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ವಿಶ್ವಮಾನವ ಯುವ ವೇದಿಕೆ, ಕ್ವೀನ್ಸ್ ಗ್ಲೋಬಲ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ ಗುರುವಾರ ಹಮ್ಮಿಕೊಂಡಿದ್ದ ‘ರಾಷ್ಟ್ರಕ್ಕಾಗಿ ಪರಿವರ್ತನೆ - ವೈಯಕ್ತಿಕ ಕೊಡುಗೆಯ ಮೂಲಕ ಭಾರತದ ಅಭಿವೃದ್ಧಿ’ ಕುರಿತ 9ನೇ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ದೇಶವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯಬೇಕಾದರೆ ಮಾಡುವ ಕೆಲಸದಲ್ಲಿ ಕೀಳರಿಮೆ ಇರಬಾರದು. ತಂತ್ರಜ್ಞಾನ ಉನ್ನತ ಮಟ್ಟಕ್ಕೇರುತ್ತಿದೆ. ಅದರ ಜತೆಗೆ ನಾವೂ ಕೂಡ ಹೊಂದಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್ ಮಾತನಾಡಿ, ‘ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯವಿದೆ. ಒಬ್ಬರ ಕಷ್ಟಕ್ಕೆ ಮತ್ತೊಬ್ಬರು ಸ್ಪಂದಿಸಬೇಕು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.
ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆ, ಎಫ್‌ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ, ಉದ್ಯಮಿ–ಒಕ್ಕಲಿಗ ಫಸ್ಟ್ ಸರ್ಕಲ್‌ನ ಅಧ್ಯಕ್ಷ ಮುನಿರಾಜು ಡಿ., ವಿಶ್ವಮಾನವ ಯುವ ವೇದಿಕೆ ಅಧ್ಯಕ್ಷ ಮಧುರಾನಿ ಗೌಡ, ಕ್ವೀನ್ಸ್ ಗ್ಲೋಬಲ್ ಮ್ಯಾನೇಜ್‌ಮೆಂಟ್‌ನ ಪಾಲುದಾರ ಮಹೇಶ್ ಜಿ.ಕೆ. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.