ADVERTISEMENT

ಶಿಕ್ಷಣ ಸುಧಾರಣೆ ಸಲಹೆಗಾರ ದೊರೆಸ್ವಾಮಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 16:28 IST
Last Updated 8 ಜನವರಿ 2020, 16:28 IST
ಎಂ.ಆರ್.ದೊರೆಸ್ವಾಮಿ
ಎಂ.ಆರ್.ದೊರೆಸ್ವಾಮಿ   

ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರರನ್ನಾಗಿ ಪಿ.ಇ.ಎಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಶಿಕ್ಷಣ ತಜ್ಞ ಪ್ರೊ.ಎಂ.ಆರ್.ದೊರೆಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಸಚಿವ ಸ್ಥಾನಮಾನ ನೀಡಿರುವುದರಿಂದ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಚೇರಿ ಹಾಗೂ ಇತರ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪಿಇಎಸ್ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದು, ಪ್ರಸ್ತುತ ಪಿಇಎಸ್ ವಿಶ್ವವಿದ್ಯಾಲಯ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2011ರಿಂದ 2016ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್, ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸದಸ್ಯರಾಗಿ, ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸೇರಿ ವಿವಿಧ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.