ಬೆಂಗಳೂರು: ಹಾಸನದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟ ಆಡಿಯೊಗಳು ಎಲ್ಲೆಡೆ ಹರಿದಾಡುತ್ತಿರುವ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಮನೆಗೆ ಕಿಡಿಗೇಡಿಗಳು ಮೊಟ್ಟೆಗಳನ್ನು ಎಸೆದು ಪರಾರಿಯಾಗಿದ್ದು, ಈ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕಾರಿನಲ್ಲಿ ಬಂದಿದ್ದ ಕಿಡಿಗೇಡಿಗಳು, ಶಿವರಾಮೇಗೌಡ ಅವರ ಮನೆಯ ಹೊರಭಾಗಕ್ಕೆ ಮೊಟ್ಟೆಗಳಿಂದ ಹೊಡೆದು ಪರಾರಿಯಾಗಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ನೋಂದಣಿ ಫಲಕವನ್ನು ಮರೆಮಾಚಿದ್ದ ಕಾರಿನಲ್ಲಿ ಕಿಡಿಗೇಡಿಗಳು ಬಂದಿದ್ದರು. ಪೆವ್‌ಡ್ರೈವ್ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದಾಗಿ ಮೊಟ್ಟೆ ಎಸೆದಿರುವ ಮಾಹಿತಿ ಇದೆ. ಆರೋಪಿಗಳನ್ನು ಪತ್ತೆ ಮಾಡಲು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ, ಶಿವರಾಮೇಗೌಡ ಮನೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.