ADVERTISEMENT

ಬೆಂಗಳೂರು: ಅಕ್ರಮವಾಗಿ ವಾಸ; ಎಂಟು ಮಂದಿ ವಿದೇಶಿ ಪ್ರಜೆಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 23:58 IST
Last Updated 10 ಫೆಬ್ರುವರಿ 2026, 23:58 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

ಸಾಂದರ್ಭಿಕ ಚಿತ್ರ

ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ ಮಹಿಳೆ ಸೇರಿ ಎಂಟು ಮಂದಿ ವಿದೇಶಿ ಪ್ರಜೆಗಳನ್ನು ಸಂಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ADVERTISEMENT

ಕ್ಯಾಮರೂನ್‌ ದೇಶದ ಐವರು ಹಾಗೂ ಸೂಡಾನ್‌ ದೇಶದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು ನಾಲ್ಕು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿದ್ದ ವಿದೇಶಿ ಪ್ರಜೆಗಳು, ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ಭೂಪಸಂದ್ರದಲ್ಲಿ ವಾಸವಾಗಿದ್ದರು.

ಅಕ್ರಮ ವಾಸಿಗಳ ಬಗ್ಗೆ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಯುತ್ತಿದ್ದು, ಮಂಗಳವಾರ ಎಂಟು ಮಂದಿ ಪತ್ತೆಯಾಗಿದ್ದು, ಎಲ್ಲರನ್ನು ಪ್ರಾದೇಶಿಕ ವಿದೇಶಿ ನೋಂದಣಿ ಕಚೇರಿಗೆ ಹಾಜರುಪಡಿಸಲಾಗುತ್ತದೆ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅವರ ದೇಶಕ್ಕೆ ವಾಪಸ್‌ ಕಳುಹಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.