ADVERTISEMENT

ಪರಿಹಾರಕ್ಕಾಗಿ ಒತ್ತಾಯಿಸಿ ಚುನಾವಣೆ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 19:55 IST
Last Updated 24 ಮಾರ್ಚ್ 2019, 19:55 IST
   

ರಾಜರಾಜೇಶ್ವರಿನಗರ: ಕೆಂಪೇಗೌಡ ಬಡಾವಣೆಗಾಗಿ ಜಮೀನು ಬಿಟ್ಟುಕೊಟ್ಟ 14 ಗ್ರಾಮಗಳ ರೈತರು ಸೂಕ್ತ ಪರಿಹಾರ ಸಿಕ್ಕಿಲ್ಲವೆಂದು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಕೆಂಪೇಗೌಡ ಬಡಾವಣೆಗಾಗಿ ಕೊಟ್ಟಿರುವ ಜಮೀನಿಗೆ ಪ್ರತಿಯಾಗಿ ಶೇ 40ರಷ್ಟು ನಿವೇಶನಗಳನ್ನು ರೈತರಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಧರಣಿ 11ನೇ ದಿನಕ್ಕೆ ಕಾಲಿಟ್ಟಿದೆ.

‘ನಮ್ಮ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರಾಜಕೀಯ ಪಕ್ಷಗಳು ವಿಫಲವಾಗಿವೆ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

‘ಮುಖ್ಯಮಂತ್ರಿಯಾಗಲಿ, ಈ ಭಾಗದ ಸಂಸದರಾದ ಡಿ.ವಿ.ಸದಾನಂದಗೌಡ ಅವರು ನಮ್ಮ ಅಳಲಿಗೆ ಸ್ಪಂದಿಸುತ್ತಿಲ್ಲ. ಅಭಿವೃದ್ಧಿ ಕೆಲಸವೂ ಮಾಡಿಲ್ಲ. ಬಿಡಿಎ ಅಧಿಕಾರಿಗಳು ಮಧ್ಯವರ್ತಿಗಳನ್ನು ಇಟ್ಟು ದಂಧೆ ಮಾಡುತ್ತಿದ್ದಾರೆ’ ಎಂದು ರೈತರು ದೂರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.