ADVERTISEMENT

ಮತದಾರರ ಪಟ್ಟಿ: ಆಕ್ಷೇಪಣೆ ಸಭೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 16:19 IST
Last Updated 13 ಡಿಸೆಂಬರ್ 2022, 16:19 IST
   

ಬೆಂಗಳೂರು:ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ನೀಡಲು ಡಿ.14ರಂದು ಸಭೆ ಆಯೋಜಿಸಲಾಗಿದೆ.

ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸೇರ್ಪಡೆ ಮತ್ತು ರದ್ದತಿ ಮಾಡಲಾದ ಮತದಾರರ ಪಟ್ಟಿಯ ಬಗ್ಗೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪದಾಧಿಕಾರಿಗಳೊಂದಿಗೆವಿಶೇಷ ಅಧಿಕಾರಿ ಅಜಯ್ ನಾಗಭೂಷಣ್‌ ಬುಧವಾರ ಸಭೆ ನಡೆಸಲಿದ್ದಾರೆ. ಮಹದೇವಪುರ ವಲಯದ ಜಂಟಿ ಆಯುಕ್ತರವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಕಂದಾಯ ಅಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT