ADVERTISEMENT

ಬೆಂಗಳೂರು: ವಿದ್ಯುತ್‌ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 20:01 IST
Last Updated 19 ಜುಲೈ 2024, 20:01 IST
   

ಬೆಂಗಳೂರು: ವಿವಿಧ ವಿದ್ಯುತ್‌ ಸ್ಟೇಷನ್‌ಗಳಲ್ಲಿ ತುರ್ತು ನಿರ್ವಹಣಾ ಕೆಲಸ
ಹಮ್ಮಿಕೊಂಡಿರುವುದರಿಂದ ಜುಲೈ 20ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಕೆಲ ಪ್ರದೇಶ
ಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ರೆಸಿಡೆನ್ಸಿರಸ್ತೆ, ಹುಂಡೈ ಆರ್‌ಎಂಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಠ್ಠಲ ಮಲ್ಯ ರಸ್ತೆ, ಚರ್ಚ್‌ ಸ್ಟ್ರೀಟ್‌, ಕಸ್ತೂರಬಾ ರಸ್ತೆ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐಟಿಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿ ಇರುವುದಿಲ್ಲ.

ಗೋಕುಲ ಎಂಯುಎಸ್ಎಸ್, ಡಿ.ಬಿ. ಸಂದ್ರ 4ನೇ ಬ್ಲಾಕ್, ಜೆ.ಬಿ. ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೊನಿ, ದಕ್ಷಿಣ ಕಾಲೊನಿ, ಬಾಹುಬಲಿ ನಗರ, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಎಚ್‌ಎಂಟಿ ಕೈಗಾರಿಕಾ ವಲಯ, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪಾರ್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, ಎಚ್‌ಎಂಆರ್‌ ಲೇಔಟ್, ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ.

ADVERTISEMENT

ಟಿ.ಟಿ.ಕೆ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 1ನೇ ಅಡ್ಡ ರಸ್ತೆಯಿಂದ 19ನೇ ಅಡ್ಡರಸ್ತೆ, ಭುವನೇಶ್ವರಿ ನಗರ, ಶೋಭಾ ಸಿಟಿ, ಚೊಕ್ಕನಹಳ್ಳಿ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೋಲೀಸ್ ಕ್ವಾಟ್ರರ್ಸ್‌, ಆರ್.ಕೆ ಹೆಗಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.