ADVERTISEMENT

ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: ಬೆಂಗಳೂರು–ಮಂಗಳೂರು ಕೆಲವು ರೈಲು ರದ್ದು

​ಪ್ರಜಾವಾಣಿ ವಾರ್ತೆ
Published 16 ಮೇ 2025, 16:00 IST
Last Updated 16 ಮೇ 2025, 16:00 IST
ಹಾಸನ–ಸುಬ್ರಹ್ಮಣ್ಯ ರೈಲು ಮಾರ್ಗ
ಹಾಸನ–ಸುಬ್ರಹ್ಮಣ್ಯ ರೈಲು ಮಾರ್ಗ   

ಬೆಂಗಳೂರು: ಸಕಲೇಶಪುರ – ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಲವು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದಾಗಲಿದೆ.

ಪ್ರತಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮತ್ತು ಪ್ರತಿ ಭಾನುವಾರ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ರದ್ದಾಗಲಿದೆ.

ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್, ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರದ್ದಾಗಲಿದೆ.

ADVERTISEMENT

ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್, ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಕೂಡ ರದ್ದಾಗಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.