ADVERTISEMENT

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರ ಬಂದ್‌

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 15:58 IST
Last Updated 5 ಮಾರ್ಚ್ 2025, 15:58 IST
ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಮೇಲ್ಸೇತುವೆ ಮೇಲಿನ ದೃಶ್ಯ
ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಮೇಲ್ಸೇತುವೆ ಮೇಲಿನ ದೃಶ್ಯ   

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಯಲ್ಲಿ (ಹೊಸೂರು ಮುಖ್ಯರಸ್ತೆ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ರಾತ್ರಿ ವೇಳೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಮೇಲ್ಸೇತುವೆಯ ಎರಡೂ ಬದಿಯಿಂದ (ಎಲೆಕ್ಟ್ರಾನಿಕ್ ಸಿಟಿ–ಸಿಲ್ಕ್‌ಬೋರ್ಡ್‌) ನಿತ್ಯ ರಾತ್ರಿ 11ರಿಂದ ಬೆಳಿಗ್ಗೆ 6ರವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಬುಧವಾರ ರಾತ್ರಿಯಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಮುಂದಿನ ಸೂಚನೆವರೆಗೂ ಜಾರಿಯಲ್ಲಿ ಇರಲಿದೆ ಎಂದು ಸಂಚಾರ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್‌ ದೇವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11ರವರೆಗೆ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನ ಸಂಚಾರಕ್ಕೆ ಅವಕಾಶವಿದೆ ಎಂದೂ ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.