ADVERTISEMENT

ದೇಶದ ಅಗತ್ಯಕ್ಕೆ ತಕ್ಕ ಶಿಕ್ಷಣ ಪದ್ಧತಿಗೆ ಒತ್ತು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 20:58 IST
Last Updated 5 ಮಾರ್ಚ್ 2023, 20:58 IST
‘ಅಂಡರ್‌–25’ ಸಂಸ್ಥೆ ಭಾನುವಾರ ಆಯೋಜಿಸಿದ್ದ ಸಂವಾದದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು.
‘ಅಂಡರ್‌–25’ ಸಂಸ್ಥೆ ಭಾನುವಾರ ಆಯೋಜಿಸಿದ್ದ ಸಂವಾದದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು.   

ಬೆಂಗಳೂರು: ‘ದೇಶದ ಅಗತ್ಯಗಳಿಗೆ ತಕ್ಕ ಶಿಕ್ಷಣ ಪದ್ಧತಿ ರೂಪಿಸುತ್ತಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.
ಅಶ್ವತ್ಥನಾರಾಯಣ ಹೇಳಿದರು.

‘ಅಂಡರ್‌–25’ ಸಂಸ್ಥೆ ಭಾನುವಾರ ಆಯೋಜಿಸಿದ್ದ ಯುವ ಸಮಾವೇಶದ ಸಂವಾದದಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಮೃತ ಕಾಲದಲ್ಲಿ ಮುನ್ನಡೆಯುತ್ತಿದೆ. ಸ್ವಾವಲಂಬನೆ, ಉದ್ಯೋಗ ಗಳಿಕೆ ಎರಡನ್ನೂ ಸಾಧ್ಯವಾಗಿಸುವಂತಹ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದು ಹೇಳಿದರ.

ADVERTISEMENT

‘ಕರ್ನಾಟಕವು ನವೋದ್ಯಮ, ಎಂಜಿನಿಯರಿಂಗ್, ಸೆಮಿಕಂಡಕ್ಟರ್, ಐ.ಟಿ– ಬಿ.ಟಿ, ಸಂಶೋಧನೆ, ಕೈಗಾರಿಕಾ ಬೆಳವಣಿಗೆಗಳಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ನಿರುದ್ಯೋಗ ನಿವಾರಣೆಗೆ ರಚನಾತ್ಮಕ ಕ್ರಮಗಳನ್ನು ಕೈಗೊಂಡಿದೆ’ ಎಂದು ಹೇಳಿದರು.

’ರಾಜ್ಯದಲ್ಲಿ ಜಾಗತಿಕ ಮಟ್ಟದ ನೂರಾರು ಕಂಪನಿಗಳಿದ್ದು, ಉದ್ಯೋಗ ವಕಾಶಕ್ಕೆ ಕೊರತೆ ಇಲ್ಲ’ ಎಂದರು.‘ಅಂಡರ್‌–25’ ಸಂಸ್ಥೆಯ ಸಹ ಸಂಸ್ಥಾಪಕ ಶ್ರೇಯಾಂಶ್ ಜೈನ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.