ADVERTISEMENT

5 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ

​ಪ್ರಜಾವಾಣಿ ವಾರ್ತೆ
Published 21 ಮೇ 2019, 19:24 IST
Last Updated 21 ಮೇ 2019, 19:24 IST

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಬಿಇ ಮತ್ತು ಎಂಬಿಎ ಪದವೀಧರರಿಗೆಹೈರ್ ಮಿ ಮತ್ತು ಸೋನಾಯುಕ್ತಿ ಸಂಸ್ಥೆಗಳ ಸಹಕಾರದಲ್ಲಿ ಕಾಲೇಜು ನಡೆಸಿದ ಉದ್ಯೋಗ ಮೇಳದಲ್ಲಿ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.ರಾಮನಗರದ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಹಾಗೂತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಯು.ತಲ್ವಾರ್ ಚಾಲನೆ ನೀಡಿ, ಉದ್ಯೋಗಾಕಾಂಕ್ಷಿಗಳಿಗೆ ಶುಭಹಾರೈಸಿದರು. ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಸಿ. ಷಣ್ಮುಗಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT