ADVERTISEMENT

ಬೆಂಗಳೂರು: ಕ್ರೆಡಲ್‌ ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 15:43 IST
Last Updated 19 ಡಿಸೆಂಬರ್ 2025, 15:43 IST
ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕ್ರೆಡಲ್‌ ಆಯೋಜಿಸಿದ್ದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕ್ರೆಡಲ್‌ ಆಯೋಜಿಸಿದ್ದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು   

ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ (ಕ್ರೆಡಲ್‌) ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಇಂಧನ ಸಂರಕ್ಷಣಾ ದಿನ ಆಚರಿಸಲಾಯಿತು. ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು.

ಕೇಂದ್ರದ ಇಂಧನ ಸಚಿವಾಲಯದ ‘ಇಂಧನ ದಕ್ಷತೆಯ ಬ್ಯೂರೊ’ (ಬಿಇಇ), ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ. ಅದರ ಭಾಗವಾಗಿ, ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಕ್ರೆಡಲ್‌ ಈ ಕಾರ್ಯಕ್ರಮವನ್ನು ಏರ್ಪಡಿಸಿತ್ತು.

ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದವರಿಗೆ ₹3,000, ಎರಡನೇ ಬಹುಮಾನ ಪಡೆದವರಿಗೆ ₹ 2,000, ಮೂರನೇ ಬಹುಮಾನ ಪಡೆದವರಿಗೆ ₹1,500 ಹಾಗೂ ಸಮಾಧಾನಕರ ಬಹುಮಾನವಾಗಿ 11 ಮಂದಿಗೆ ತಲಾ ₹ 500 ನಗದು ವಿತರಿಸಲಾಯಿತು. ಇಂಧನ ದಕ್ಷತೆಗಾಗಿ ಎಲ್‌ಇಡಿ ಬಲ್ಬ್‌ ಗಳನ್ನು ಬಳಸಬೇಕು ಎಂಬ ಸಂದೇಶ ಸಾರಲು ವಿದ್ಯಾರ್ಥಿಗಳಿಗೆ ಬಲ್ಬ್‌ ವಿತರಿಸಲಾಯಿತು.

ADVERTISEMENT

ಕ್ರೆಡಲ್‌ನ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಅಮರನಾಥ್‌, ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.