
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವವರು ತಮ್ಮ ಉತ್ಪಾದನೆಯ ಪೂರ್ಣ ಪ್ರಮಾಣದ ವಿದ್ಯುತ್ ಅನ್ನು ರಾಜ್ಯ ಸರ್ಕಾರಕ್ಕೆ ಮಾರಾಟ ಮಾಡಬೇಕೆಂಬ ನಿರ್ಬಂಧವನ್ನು ಇಂಧನ ಇಲಾಖೆ ಹಿಂಪಡೆದಿದೆ.
ಬರಗಾಲ ಮತ್ತು ವಿದ್ಯುತ್ ಬೇಡಿಕೆಯಲ್ಲಿನ ಹೆಚ್ಚಳದ ಕಾರಣದಿಂದ ರಾಜ್ಯದಲ್ಲಿನ ಎಲ್ಲ ವಿದ್ಯುತ್ ಉತ್ಪಾದಕರು ಉತ್ಪಾದನೆಯಾದ ಸಂಪೂರ್ಣ ವಿದ್ಯುತ್ ಅನ್ನು ರಾಜ್ಯ ಸರ್ಕಾರಕ್ಕೆ ಮಾರಾಟ ಮಾಡುವುದನ್ನು ಕಡ್ಡಾಯಗೊಳಿಸಿ 20203ರ ಅಕ್ಟೋಬರ್ 16ರಂದು ಅದೇಶ ಹೊರಡಿಸಲಾಗಿತ್ತು.
ಈಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯುತ್ ಬೇಡಿಕೆ ತಗ್ಗಿದೆ. ಮುಂಗಾರು ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಮತ್ತು ಪವನ ವಿದ್ಯುತ್ ಉತ್ಪಾದನೆಯಲ್ಲೂ ಹೆಚ್ಚಳವಾಗುವ ಸಾಧ್ಯತೆಯನ್ನು ಮನಗಂಡು ವಿದ್ಯುತ್ ಮಾರಾಟದ ಮೇಲಿನ ನಿರ್ಬಂಧ ಹಿಂಪಡೆಯಲಾಗಿದೆ ಎಂದು ಇಂಧನ ಇಲಾಖೆ ಮೇ 24ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.