ADVERTISEMENT

ಎಂಜಿನಿಯರಿಂಗ್ ನೇರ ಪ್ರವೇಶ: ಡಿ.18ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 15:50 IST
Last Updated 15 ಡಿಸೆಂಬರ್ 2023, 15:50 IST
   

ಬೆಂಗಳೂರು: ಎಂಜಿನಿಯರಿಂಗ್‌ 2 ಅಥವಾ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿಗೆ (ಲ್ಯಾಟರಲ್‌ ಎಂಟ್ರಿ) ಅರ್ಹರಾಗಿರುವ ವೃತ್ತಿನಿರತ ಡಿಪ್ಲೊಮಾ ಪದವೀಧರರು, ಡಿ.18ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಡಿ.21ರಂದು ಅರ್ಜಿ ಸಲ್ಲಿಕೆಗೆ ಕೊನೆ ದಿನ. ಡಿ.26ರ ಸಂಜೆ ರ್‍ಯಾಂಕ್‌ ಪಟ್ಟಿ ಪ್ರಕಟಿಸಲಾಗುವುದು. ಡಿ.27 ಮತ್ತು 28ರಂದು ಪ್ರಾಧಿಕಾರದ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಲಭ್ಯವಿರುವ ಎಂಜಿನಿಯರಿಂಗ್‌ ಕಾಲೇಜುಗಳು, ಕೋರ್ಸುಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌: http://kea.kar.nic.inನಲ್ಲಿ ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ.

ಕೆಸೆಟ್ ನೋಂದಣಿಗೆ ಅವಕಾಶ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ ಸೆಟ್)‌ ಇದುವರೆಗೂ ನೋಂದಣಿ ಮಾಡಿಕೊಳ್ಳದೆ ಇರುವವರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಡಿ.18 ಮತ್ತು 19ರಂದು ನೋಂದಣಿ ಮಾಡಿಕೊಳ್ಳಬಹುದಾಗಿದೆ.‌

ADVERTISEMENT

ಪ್ರಾಧಿಕಾರದ ಜಾಲತಾಣದಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಪಠ್ಯಕ್ರಮ, ಅರ್ಜಿ ಸಲ್ಲಿಸುವ ಲಿಂಕ್‌ ವಿವರ ಒದಗಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕೆ–ಸೆಟ್‌ ಪರೀಕ್ಷೆಯಲ್ಲಿ ಲಿಪಿಕಾರರ ನೆರವು ಬಯಸಿರುವ ಅಭ್ಯರ್ಥಿಗಳು ಡಿ.22ರ ಸಂಜೆ 5ರ ಒಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್‌ನಲ್ಲಿ, ಲಿಪಿಕಾರರ ಮಾಹಿತಿಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.