
ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಬಿಸಿನೆಸ್ ಕಾರಿಡಾರ್ ಲಿಮಿಟೆಡ್‌ನ ಅಧ್ಯಕ್ಷ ಎಲ್.ಕೆ. ಅತೀಕ್ ತಿಳಿಸಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸಂಯೋಜಿತವಾಗಿರುವ ಸ್ವಾಯತ್ತ ಸಂಸ್ಥೆ ಬೆಂಗಳೂರಿನ ಬಿ.ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನ 2025ರ ಬ್ಯಾಚ್‌ನ ಪದವಿ ದಿನ-II ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಎಂಜಿನಿಯರ್‌ಗಳಿಗೆ ಹೆಚ್ಚಿನ ಅವಕಾಶವಿದ್ದು, ಎಂಜಿನಿಯರಿಂಗ್ ಪದವಿ ಪಡೆಯುವವರ ಸಂಖ್ಯೆ ಹೆಚ್ಚಬೇಕು ಎಂದು ಆಶಿಸಿದರು.
ಉತ್ತಮ ಮನುಷ್ಯರಾಗಲು ಕಠಿಣ ಪರಿಶ್ರಮ ಪಡಬೇಕು. ಸಾಧನೆ ಮಾಡಲು ಗುರಿ ಇರಬೇಕು ಮತ್ತು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.
ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಬಿಒಜಿ ಸದಸ್ಯ, ಕರ್ನಲ್ (ನಿವೃತ್ತ) ಎಚ್.ಎಸ್. ಶಂಕರ್, ಪ್ರಾಂಶುಪಾಲ ಭೀಮಶಾ ಆರ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.