ADVERTISEMENT

ನಗರೀಕರಣದಿಂದ ಪರಿಸರ ನಾಶ: ಡಾ. ಪ್ರಶಾಂತ್

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 20:39 IST
Last Updated 11 ಜನವರಿ 2023, 20:39 IST
ಆಸ್ಪತ್ರೆಯ ಸಿಬ್ಬಂದಿ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.
ಆಸ್ಪತ್ರೆಯ ಸಿಬ್ಬಂದಿ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.   

ಬೆಂಗಳೂರು: ‘ಪರಿಸರದ ಮೇಲಿನ ನಿರಂತರ ಆಕ್ರಮಣ ಹಾಗೂ ನಗರೀಕರಣದಿಂದಾಗಿ ಇಂದು ಪ್ರಕೃತಿ ವಿನಾಶದತ್ತ ಸಾಗುತ್ತಿದೆ’ ಎಂದು ಆಸ್ಟರ್‌ ಆರ್‌.ವಿ.ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರಶಾಂತ್ ಕಳವಳ ವ್ಯಕ್ತಿಪಡಿಸಿದರು.

ಆಸ್ಪತ್ರೆ ನಗರದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಅಭಿಯಾನದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ನಿರ್ಮಿಸಲು ನಗರ ಪ್ರದೇಶದಲ್ಲಿ ಗಿಡಗಳನ್ನು ಬೆಳೆಸಬೇಕು. ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಆಗಬೇಕು. ಪರಿಸರದ ಮಹತ್ವ ಅರಿತು ಕಾರ್ಯೋನ್ಮುಖರಾಗಬೇಕು’ ಎಂದು ಹೇಳಿದರು.

ಆಸ್ಪತ್ರೆಯ ಸಾಮಾಜಿಕ ಹೊಣೆಗಾರಿಕೆ ನಿಧಿ ವಿಭಾಗದ ಮುಖ್ಯಸ್ಥ ರೋಹನ್, ‘ನಗರದಲ್ಲಿ ಮಾಲಿನ್ಯ ಹಾಗೂ ತಾಪಮಾನ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಸಿದಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು‘ ಎಂದರು.

ADVERTISEMENT

ಆಸ್ಪತ್ರೆಯ 50ಕ್ಕೂ ಅಧಿಕ ಸಿಬ್ಬಂದಿ ಬನ್ನೇರುಘಟ್ಟದ ಬಳಿ 150 ಗಿಡಗಳನ್ನು ನೆಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.