ADVERTISEMENT

ರಾಮಣ್ಣಗೆ ‘ಮಹಾಕವಿ ಕುವೆಂಪು ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 18:48 IST
Last Updated 12 ಡಿಸೆಂಬರ್ 2025, 18:48 IST
<div class="paragraphs"><p>ರಾಮಣ್ಣ ಕೋಡಿಹೊಸಹಳ್ಳಿ</p></div>

ರಾಮಣ್ಣ ಕೋಡಿಹೊಸಹಳ್ಳಿ

   

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2025ನೇ ಸಾಲಿನ ‘ಮಹಾಕವಿ ಕುವೆಂಪು ಪ್ರಶಸ್ತಿ’ಗೆ ಕನ್ನಡ ಪರ ಹೋರಾಟ ಗಾರ ಹಾಗೂ ಪತ್ರಕರ್ತ ರಾಮಣ್ಣ ಕೋಡಿಹೊಸಹಳ್ಳಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹15 ಸಾವಿರ ನಗದು, ಕಂಚಿನ ಫಲಕ ಮತ್ತು ಅಭಿನಂದನಾ ಪತ್ರ ಒಳಗೊಂಡಿದೆ. ಜನವರಿ 9ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬಸವರಾಜ ಕಲ್ಗುಡಿ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.