ADVERTISEMENT

ಕನಿಷ್ಠ ₹7,500 ಪಿಂಚಣಿ ನೀಡಲು ನಿವೃತ್ತ ನೌಕರರ ಆಗ್ರಹ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 10:43 IST
Last Updated 29 ಆಗಸ್ಟ್ 2025, 10:43 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕನಿಷ್ಠ ₹7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್‌–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಭವಿಷ್ಯ ನಿಧಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ADVERTISEMENT

2014ರಿಂದ ಇಪಿಎಸ್ ನಿವೃತ್ತರಿಗೆ ₹1000 ನೀಡಲಾಗುತ್ತಿದೆ. ಇನ್ನೂ ಕೆಲವರು ಒಂದು ಸಾವಿರ ರೂಪಾಯಿಗಿಂತ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ ಎಂದು ಪ್ರತಿಭಟನಕಾರರು ಬೇಸರ ವ್ಯಕ್ತಪಡಿಸಿದರು.

ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಲ್ಲ. ಇಪಿಎಸ್ ವ್ಯಾಪ್ತಿಗೆ ಬಾರದ ನಿವೃತ್ತ ನೌಕರರಿಗೆ ₹5 ಸಾವಿರ ನೀಡಬೇಕು. ಹತ್ತು ವರ್ಷಗಳಲ್ಲಿ ಲಕ್ಷಾಂತರ ಇಪಿಎಸ್ ನೌಕರರು ವಯೋಸಹಜ ಹಾಗೂ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸೆಪ್ಟಂಬರ್ 15ರೊಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘದ ಅಧ್ಯಕ್ಷ ನಂಜುಂಡೇಗೌಡ ಎಚ್ಚರಿಸಿದರು.

ನಿವೃತ್ತಿ ಹೊಂದಿದ ನೌಕರರಿಗೆ ಆರು ತಿಂಗಳೊಳಗೆ ಪಿಂಚಣಿ ಹೆಚ್ಚಿಸುವಂತೆ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಇಪಿಎಫ್‌ಒ ಅಧಿಕಾರಿಗಳು ಜಾರಿಗೊಳಿಸಿಲ್ಲ. ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಭವಿಷ್ಯ ನಿಧಿ ಪ್ರಾದೇಶಿಕ ಆಯುಕ್ತರ ಕಚೇರಿ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಕಾರ್ಯಾಧ್ಯಕ್ಷ ಶಂಕರ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಸುಬ್ಭಣ್ಣ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.