ಯಲಹಂಕ: ಸಿಂಗನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡಲಾದ ಸಲಕರಣೆಗಳನ್ನು ಶಾಸಕ ಎಸ್.ಆರ್.ವಿಶ್ವನಾಥ್, ವಿವಿಧ ವೃತ್ತಿಯ ಕಾರ್ಮಿಕರಿಗೆ ಈಚೆಗೆ ವಿತರಿಸಿದರು.
ನಂತರ ಮಾತನಾಡಿದ ಅವರು, ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಮನೆ ನಿರ್ಮಿಸಿಕೊಳ್ಳಲು ರಿಯಾಯಿತಿ ಸೇರಿ ಹಲವು ಯೋಜನೆಗಳನ್ನು ಸರ್ಕಾರ ಕಾರ್ಮಿಕರಿಗಾಗಿ ಜಾರಿಗೆತಂದಿದೆ. ಆದರೆ ಕಾರ್ಮಿಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಯಲಹಂಕ ಕ್ಷೇತ್ರವ್ಯಾಪ್ತಿಯ 250 ಕಾರ್ಮಿಕರಿಗೆ ಮೇಸನ್, ಎಲೆಕ್ಟ್ರಿಷಿಯನ್ ಹಾಗೂ ವೆಲ್ಡಿಂಗ್ ಟೂಲ್ ಕಿಟ್‌ಗಳನ್ನು ವಿತರಿಸಲಾಯಿತು.
ಹಿರಿಯ ಕಾರ್ಮಿಕ ನಿರೀಕ್ಷಕರಾದ ಅರ್ಚನಾ ಪ್ರತಾಪ್ ಸಿಂಗ್ ಚೌಹಾನ್, ಸಮಗ್ರ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಾಬು, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಂ.ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.