ADVERTISEMENT

‘ಕಾವೇರಿ ಕೂಗು’ ಆಕ್ಷೇಪಿಸಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:15 IST
Last Updated 13 ಸೆಪ್ಟೆಂಬರ್ 2019, 20:15 IST
   

ಬೆಂಗಳೂರು: ‘ಕಾವೇರಿ ಕೂಗು ಯೋಜನೆಯಡಿ ಗಿಡ ಬೆಳೆಸಲು ಸಾರ್ವಜನಿಕರಿಂದ ಹಣ ವಸೂಲಿಗೆ ಮುಂದಾಗಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಇಶಾ ಫೌಂಡೇಶನ್‌ ಸದ್ಗುರು ಜಗ್ಗಿ ವಾಸುದೇವ್‌ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಹೈಕೋರ್ಟ್ ವಕೀಲ ಎ.ವಿ.ಅಮರನಾಥನ್‌ ಈ ಅರ್ಜಿ ಸಲ್ಲಿಸಿದ್ದು ಇದಿನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನೂ ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಆಕ್ಷೇಪಣೆ ಏನು?: ‘ಕಾವೇರಿ ತಟದ 639 ಕಿ.ಮೀ ಉದ್ದಗಲಕ್ಕೂ 253 ಕೋಟಿ ಗಿಡ ನೆಡಲು ಇಶಾ ಫೌಂಡೇಶನ್‌ ಉದ್ದೇಶಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ 1 ಗಿಡಕ್ಕೆ ₹ 42 ಪಡೆಯಲು ಮುಂದಾಗಿದೆ. ಇದರ ಒಟ್ಟು ಮೊತ್ತ ₹ 10,626 ಕೋಟಿ ಆಗುತ್ತದೆ. ಇದೊಂದು ಆತಂಕಕಾರಿ ವಿಚಾರ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ADVERTISEMENT

‘ಈ ಅರ್ಜಿ ಇತ್ಯರ್ಥವಾಗುವ ತನಕ ಇಶಾ ಫೌಂಡೇಶನ್‌ ಕಾವೇರಿ ಕೂಗು ಯೋಜನೆಯಡಿ ಯಾವುದೇ ಹಣ ಸಂಗ್ರಹ ಮಾಡದಂತೆ ತಡೆ ನೀಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.