ADVERTISEMENT

ಬೆಸ್ಕಾಂ ಕಾರ್ಪೊರೇಟ್ ಕಚೇರಿ: ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 17:27 IST
Last Updated 15 ಆಗಸ್ಟ್ 2025, 17:27 IST
ಬೆಸ್ಕಾಂ ಕಾರ್ಪೊರೇಟ್ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಬ್ಯಾಟರಿ ವಿನಿಮಯ ಕೇಂದ್ರಕ್ಕೆ  ಶುಕ್ರವಾರ ಚಾಲನೆ ನೀಡಲಾಯಿತು.
ಬೆಸ್ಕಾಂ ಕಾರ್ಪೊರೇಟ್ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಬ್ಯಾಟರಿ ವಿನಿಮಯ ಕೇಂದ್ರಕ್ಕೆ  ಶುಕ್ರವಾರ ಚಾಲನೆ ನೀಡಲಾಯಿತು.   

ಬೆಂಗಳೂರು: ಬೆಸ್ಕಾಂ ಕಾರ್ಪೊರೇಟ್ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಅವರು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ಬ್ಯಾಟರಿ ವಿನಿಮಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

‘ಬೆಂಗಳೂರಿನ ಇವಿ ಬಳಕೆದಾರರಿಗೆ ತ್ವರಿತ ಹಾಗೂ ವಿಶ್ವಾಸಾರ್ಹ ಇವಿ ಚಾರ್ಜಿಂಗ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಇದು ಪ್ರಮುಖ ಮೈಲಿಗಲ್ಲು. ಸುಮಾರು 250 ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ವಹಿಸುತ್ತಿರುವ ಇಂಡೋ ಫಾಸ್ಟ್ ಎನರ್ಜಿ ಕಂಪನಿಯ ಸಹಭಾಗಿತ್ವದಲ್ಲಿ ಇವಿ ಬ್ಯಾಟರಿ ವಿನಿಮಯ ಕೇಂದ್ರ ಸ್ಥಾಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಇವಿ ವಾಹನಗಳಲ್ಲಿನ ಖಾಲಿಯಾದ ಬ್ಯಾಟರಿಗಳನ್ನು ಜಾರ್ಜ್‌ ಆದ ಬ್ಯಾಟರಿಗಳೊಂದಿಗೆ ಕೇವಲ 2 ನಿಮಿಷದಲ್ಲಿ ವಿನಿಮಯ ಮಾಡಿಕೊಳ್ಳಬಹುದು. ದ್ವಿಚಕ್ರ ಹಾಗೂ ತ್ರಿಚಕ್ರ ಇವಿ ಬಳಕೆದಾರರಿಗೆ ಇದರಿಂದ ಅನುಕೂಲವಾಗಲಿದೆ’ ಎಂದರು.

ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ. ರಮೇಶ್, ಡಿಎಸ್‌ಎಂ ವಿಭಾಗದ ಪ್ರಧಾನ ವ್ಯವಸ್ಥಾಪಕಿ ಉಮಾ ಎಚ್.ಎಂ, ಇಂಡೋಫಾಸ್ಟ್ ಎನರ್ಜಿ ಸಿಇಒ ಅನಂತ್ ಬಡ್ಜತ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.