ADVERTISEMENT

ಬೆಂಗಳೂರು | ಚಾರ್ಜಿಂಗ್ ವೇಳೆ ಇ.ವಿ ಬೈಕ್ ಸ್ಫೋಟ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 15:55 IST
Last Updated 13 ಅಕ್ಟೋಬರ್ 2025, 15:55 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

(ಐಸ್ಟೋಕ್ ಚಿತ್ರ)

ಬೆಂಗಳೂರು: ಚಾರ್ಜಿಂಗ್‌ ವೇಳೆ ವಿದ್ಯುತ್ ಚಾಲಿತ (ಇವಿ) ಬೈಕ್ ಸ್ಫೋಟಗೊಂಡು, ಸುಟ್ಟು ಕರಕಲಾಗಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ADVERTISEMENT

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಶಿವನಗರ ನಿವಾಸಿ ಮುಕೇಶ್‌, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನೆಲಮಹಡಿಯಲ್ಲಿ ಬೈಕ್‌ ಅನ್ನು ಚಾರ್ಜಿಂಗ್‌ಗೆ ಹಾಕಿ, ಮೊದಲ ಮಹಡಿಯಲ್ಲಿರುವ ಮನೆಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಬೈಕ್‌ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ತಕ್ಷಣ ಮನೆಯವರು ಗಮನಿಸಿ ಕೆಳಗೆ ಇಳಿದು ಬಂದು ನೋಡಿದಾಗ ಬೈಕ್‌ಗೆ ಹೊತ್ತಿಕೊಂಡಿದ್ದ ಬೆಂಕಿ ಪಕ್ಕದಲ್ಲೇ ನಿಲ್ಲಿಸಿದ್ದ ಸೈಕಲ್‌ಗೂ ಆವರಿಸಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯರ ನೆರವು ಪಡೆದು ಬೈಕ್‌ ಅನ್ನು ನೆಲಮಹಡಿಯಿಂದ ಎಳೆದು ಹೊರಗೆ ಹಾಕಿದ್ದಾರೆ. ಅದರಿಂದ ಮನೆಗೆ ಬೆಂಕಿ ವ್ಯಾಪಿಸುವುದು ತಪ್ಪಿದಂತಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದರು.

ರಾಜಾಜಿನಗರದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೈಕ್ ಸ್ಫೋಟಕ್ಕೆ  ನಿಖರ ಕಾರಣ ಗೊತ್ತಾಗಿಲ್ಲ. ಬಸವೇಶ್ವರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಯಾರೂ ದೂರು ನೀಡಿಲ್ಲ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.