ADVERTISEMENT

ಗ್ರಾಮಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ಪಿ.ರಾಹುಲ್‌

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 16:20 IST
Last Updated 8 ಅಕ್ಟೋಬರ್ 2024, 16:20 IST
ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ಮಾರೇನಹಳ್ಳಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು
ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ಮಾರೇನಹಳ್ಳಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ಮಾರೇನಹಳ್ಳಿ ಗ್ರಾಮ ಪಂಚಾಯಿತಿಯ 2024–25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ರಾಹುಲ್‌ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳು ಸೇರಿದಂತೆ ಪಂಚಾಯತ್‌ರಾಜ್‌ ಇಲಾಖೆಯ ವಿವಿಧ ವಿಷಯಗಳ ಕುರಿತು ತಿಳಿದುಕೊಳ್ಳಲು ಗ್ರಾಮಸಭೆಯಲ್ಲಿ ಸಾರ್ವಜನಿಕರು  ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸವಲತ್ತುಗಳ ವಿತರಣೆ:

ADVERTISEMENT

ಎಸ್‌.ಎಸ್‌.ಎಲ್‌.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಶಿಷ್ಟ ಜಾತಿ-ಪಂಗಡದ ಮರಣಹೊಂದಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಸಹಾಯಧನದ ಚೆಕ್‌ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಲ್ಪತರು ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಗುಂಪಿನ ಸದಸ್ಯರು ತಯಾರಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ನಾಗರಾಜ್‌, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂಜಮ್ಮ ಬಲ್ಲಯ್ಯ, ಸದಸ್ಯರಾದ ಗೀತಾ ಆನಂದಕುಮಾರ್‌, ವಿ.ನಾರಾಯಣಸ್ವಾಮಿ, ರತ್ನಮ್ಮ ವೆಂಕಟಸ್ವಾಮಿ, ಮಾಜಿ ಅಧ್ಯಕ್ಷರಾದ ವಿ.ನಂಜೇಗೌಡ, ಬಿ.ಎ.ಪ್ರೇಮಾ, ಮಾಜಿ ಉಪಾಧ್ಯಕ್ಷೆ ಕಮಲಮ್ಮ ಮುನಿರಾಮಣ್ಣ, ಪಿಡಿಒ ಟಿ.ಪಿ.ಸುಮ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.