ADVERTISEMENT

‘ಪ್ರಧಾನಿ ಮೋದಿ ರಾಜ ಋಷಿ’–ಎಸ್.ಎಂ.ಕೃಷ್ಣ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 20:35 IST
Last Updated 11 ನವೆಂಬರ್ 2020, 20:35 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ರಾಜ ಋಷಿ. ಅವರಿಗೆ ಯಾವುದೇ ಆಸೆ ಅಥವಾ ಪ್ರಲೋಭನೆಗಳು ಇಲ್ಲ. ದೇಶವೇ ಅವರಿಗೆ ದೇವರು. ಅವರು ಪ್ರಧಾನಿ ಆಗಿದ್ದು ನಮ್ಮೆಲ್ಲರ ಸೌಭಾಗ್ಯ’ ಎಂದು ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಹೇಳಿದ್ದಾರೆ.

ಆರ್‌.ಆರ್‌.ನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಮುನಿರತ್ನ ಅವರು ಬುಧವಾರ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದ ಕೃಷ್ಣ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಕನಸು ಕಾಣುತ್ತಿರುವ ಬಗ್ಗೆ ತೆಲುಗಿನ ಗಾದೆಯೊಂದನ್ನು ಹೇಳಿ ವ್ಯಂಗ್ಯವಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.