ಬೆಂಗಳೂರು: ‘ಎಂಬಿಬಿಎಸ್, ದಂತ ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸ್‌ಗಳ 2023–24ನೇ ಸಾಲಿನ ಪರಿಷ್ಕೃತ ಸೀಟ್ ಮೆಟ್ರಿಕ್ ಪಟ್ಟಿಯಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಸರಿಯಾಗಿ ಸೀಟ್ ಹಂಚಿಕೆಯಾಗಿಲ್ಲ’ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಆರೋಪಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎನ್.ಕೆ. ಶಿವಣ್ಣ, ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023–24 ನೇ ಸಾಲಿನ ವೈದ್ಯಕೀಯ ಶಿಕ್ಷಣಕ್ಕೆ 3,365 ಸೀಟ್‌ಗಳಿದ್ದು, ಅದರಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಕೇವಲ 6 ಸೀಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ದಂತ ವೈದ್ಯಕೀಯ ಶಿಕ್ಷಣಕ್ಕೆ 1,738 ಸೀಟ್‌ಗಳಿದ್ದು, ಅದರಲ್ಲೂ 6 ಸೀಟ್‌ಗಳನ್ನು ಹಂಚಿಕೆಯಾಗಿದ್ದು, ತಾಂತ್ರಿಕ ಶಿಕ್ಷಣದ ವಿವಿಧ ಕೋರ್ಸ್‌ಗಳಿಗೆ 64 ಸೀಟುಗಳು ಹಂಚಿಕೆ ಮಾಡಿ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.
‘ಮಾಜಿ ಸೈನಿಕರಿಗೆ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡುತ್ತಿರುವಂತೆ, ಮಾಜಿ ಸೈನಿಕರ ಮಕ್ಕಳಿಗೂ ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸ್‌ಗಳ ಸೀಟ್ ಹಂಚಿಕೆಯಲ್ಲೂ ಶೇ 10ರಷ್ಟು ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.