ADVERTISEMENT

ಅಬಕಾರಿ ಪರವಾನಗಿ ನೀಡಲು ಲಂಚ: ಜಗದೀಶ್, ತಮ್ಮಣ್ಣ ಅಮಾನತು

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 23:30 IST
Last Updated 20 ಜನವರಿ 2026, 23:30 IST
<div class="paragraphs"><p>ಅಮಾನತು</p></div>

ಅಮಾನತು

   

ಬೆಂಗಳೂರು: ಅಬಕಾರಿ ಪರವಾನಗಿ ನೀಡಲು ಲಂಚ ಪಡೆದ ಆರೋಪ ಪ್ರಕರಣದಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ ಹಾಗೂ ಸೂಪರಿಂಟೆಂಡೆಂಟ್ ಕೆ.ಎಂ.ತಮ್ಮಣ್ಣ ಅವರನ್ನು ಅಮಾನತು ಮಾಡಲಾಗಿದೆ.

ಜ. 17ರಂದು ₹25 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಜಗದೀಶ್ ನಾಯ್ಕ್, ತಮ್ಮಣ್ಣ ಮತ್ತು ಕಾನ್‌ಸ್ಟೆಬಲ್ ಲಕ್ಕಪ್ಪ ಗನಿಯನ್ನು ಬಂಧಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಜಂಟಿ ಆಯುಕ್ತರು, ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಅದನ್ನು ಆಧರಿಸಿ ಕರ್ನಾಟಕ ನಾಗರಿಕ ಸೇವಾ ನಿಮಯದಡಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಗರದ ಹುಳಿಮಾವು ನಿವಾಸಿ ಲಕ್ಷ್ಮೀನಾರಾಯಣ ಅವರು ಸೋಮವಾರ ಲೋಕಾಯುಕ್ತ ಎಸ್ಪಿ ಅವರನ್ನು ಭೇಟಿ ಮಾಡಿ, ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಮತ್ತು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಅಲ್ಲದೆ ದೂರಿನ ಜತೆ ಆಡಿಯೊ ರೆಕಾರ್ಡ್‌, ಪೆನ್ ಡ್ರೈವ್ ಸೇರಿ ಕೆಲ ದಾಖಲೆಗಳನ್ನು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.