ADVERTISEMENT

ಬೆಂಗಳೂರು: ಅ.20 ರಿಂದ 29ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2023, 15:28 IST
Last Updated 19 ಅಕ್ಟೋಬರ್ 2023, 15:28 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಿಂದ ಇದೇ 20ರಿಂದ 29ರವರೆಗೆ ‘ಗಾಂಧಿ ಶಿಲ್ಪ ಬಜಾರ್‌’ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕತ್ರಿಗುಪ್ಪೆಯ ನ್ಯೂ ವೆಂಕಟಾದ್ರಿ ಕಲ್ಯಾಣ ಮಂಟಪ ಆಯೋಜಿಸಲಾಗಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ವಿಶ್ವನಾಥ, ‘ಮೇಳದಲ್ಲಿ ಕೈಮಗ್ಗ, ಜವಳಿ, ಕರಕುಶಲ ವಸ್ತುಗಳು ಮತ್ತು ಆಭರಣಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ದೇಶದ ವಿವಿಧ ರಾಜ್ಯಗಳ 100 ಕರಕುಶಲ ಕರ್ಮಿಗಳು ಭಾಗವಹಿಸಲಿದ್ದು, ನೇರವಾಗಿ ತಮ್ಮ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಸಣ್ಣ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ್ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಶಾಸಕ ಎಲ್.ಎ. ರವಿಸುಬ್ರಮಣ್ಯ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.