ADVERTISEMENT

ಬೆಂಗಳೂರಿನಲ್ಲಿ ಮಾಲಿನ್ಯ ತಡೆಗೆ ತಜ್ಞರ ತಂಡ ರಚಿಸಿ: ಡಿ.ಕೆ. ಶಿವಕುಮಾರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 19:56 IST
Last Updated 8 ಡಿಸೆಂಬರ್ 2025, 19:56 IST
<div class="paragraphs"><p>ಡಿ.ಕೆ ಶಿವಕುಮಾರ್‌</p></div>

ಡಿ.ಕೆ ಶಿವಕುಮಾರ್‌

   

ಫೇಸ್‌ಬುಕ್‌ ಚಿತ್ರ

ಬೆಂಗಳೂರು: ಬೆಂಗಳೂರಿನ ವಾಯು ಮಾಲಿನ್ಯದ ಅಪಾಯವನ್ನು ತಡೆಗಟ್ಟಲು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ADVERTISEMENT

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್‌ ಈ ಸೂಚನೆ ನೀಡಿದ್ದಾರೆ.

ನಗರದಲ್ಲಿ 1,23,24,919 ನೋಂದಾಯಿತ ವಾಹನಗಳಿವೆ. ಜನಸಂಖ್ಯೆ (ಸುಮಾರು 1.47 ಕೋಟಿ) ಮತ್ತು ವಾಹನಗಳ ಅನುಪಾತವು ಸರಿಸುಮಾರು ಪ್ರತಿ ನಾಗರಿಕರಿಗೆ ಒಂದು ವಾಹನ ಎಂಬಂತಾಗಿದೆ. ಪ್ರತಿದಿನ ಸರಾಸರಿ 2,563 ಹೊಸ ವಾಹನಗಳು ಬೆಂಗಳೂರಿನಲ್ಲಿ ನೋಂದಣಿಯಾಗುತ್ತಿವೆ. ಇವುಗಳಲ್ಲಿ 84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಾಗಿವೆ. ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) 50 ಅನ್ನು ಮೀರಿ 70 ‘ಮಧ್ಯಮ’ ವರ್ಗದಲ್ಲಿದೆ. ಮುಂದಿನ 5-10 ವರ್ಷಗಳಲ್ಲಿ ನಗರವು 'ತೀವ್ರ' ಮಾಲಿನ್ಯದ ಮಟ್ಟ ತಲುಪಬಹುದು ಎಂದು ದಿನೇಶ್‌ ಗೂಳಿಗೌಡ ಮನವಿಯಲ್ಲಿ ತಿಳಿಸಿದ್ದರು.

ಮಾಲಿನ್ಯದಿಂದಾಗಿ ಮಕ್ಕಳು, ಹಿರಿಯರು ಉಸಿರಾಟದ ತೊಂದರೆ, ಅಲರ್ಜಿ, ಆಸ್ತಮಾ ಮತ್ತು ಹೃದಯ ಸಂಬಂಧಿ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಪರಿಸರ ವಿಜ್ಞಾನಿಗಳು, ಸಂಚಾರ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕು ಎಂದು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.