ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಪೀಣ್ಯ ದಾಸರಹಳ್ಳಿ: ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ, ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ದಿಜುಧಾರ್(34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ(50), ಶೋಭ(60) ಹಾಗೂ ಕರೀಬುಲ್ಲ ಅವರಿಗೆ ಗಂಭೀರ ಗಾಯವಾಗಿದೆ.
ವಿಕ್ಟೋರಿಯಾ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಪೀಣ್ಯಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಘಟನೆಯಿಂದ ಅಕ್ಕಪಕ್ಕದ 11 ಮನೆಯ ಕಿಟಕಿಗೆ ಹಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.