ADVERTISEMENT

ಬೆಂಗಳೂರು | ಸ್ಫೋಟಕ ಪತ್ತೆ : ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 18:29 IST
Last Updated 19 ಮಾರ್ಚ್ 2024, 18:29 IST
ಬೆಳ್ಳಂದೂರು ಠಾಣೆ ಪೊಲೀಸರು ಜಪ್ತಿ ಮಾಡಿರುವ ಸ್ಫೋಟಕಗಳು
ಬೆಳ್ಳಂದೂರು ಠಾಣೆ ಪೊಲೀಸರು ಜಪ್ತಿ ಮಾಡಿರುವ ಸ್ಫೋಟಕಗಳು   

ಬೆಂಗಳೂರು: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳನ್ನು ಬೆಳ್ಳಂದೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದು, ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

‘ಶಾಲೆಯೊಂದರ ಬಳಿ ಹೊರಟಿದ್ದ ಟ್ರ್ಯಾಕ್ಟರ್‌ನಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಕೆಲ ಸ್ಫೋಟಕ ಸಾಮಗ್ರಿಗಳು ಇದ್ದವು. ಅವುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟಕ ಅಕ್ರಮ ಸಾಗಣೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಖಾಲಿ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿದೆ. ಈ ಜಾಗದಲ್ಲಿದ್ದ ಬಂಡೆಗಳನ್ನು ಒಡೆಯಲು ಸ್ಫೋಟಕ ಸಂಗ್ರಹಿಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.