ADVERTISEMENT

ಎಕ್ಸ್‌ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಿಸಿಕೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 19:47 IST
Last Updated 17 ಸೆಪ್ಟೆಂಬರ್ 2022, 19:47 IST
ಎಕ್ಸ್‌ಪ್ರೆಸ್ ಕ್ಲಿನಿಕ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಿಬಿಎಂಪಿ ವಿಶೇಷ ಆಯುಕ್ತರಾದ ದೀಪಕ್, ತ್ರಿಲೋಕ ಚಂದ್ರ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇದ್ದರು
ಎಕ್ಸ್‌ಪ್ರೆಸ್ ಕ್ಲಿನಿಕ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಿಬಿಎಂಪಿ ವಿಶೇಷ ಆಯುಕ್ತರಾದ ದೀಪಕ್, ತ್ರಿಲೋಕ ಚಂದ್ರ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇದ್ದರು   

ಬೆಂಗಳೂರು: ಮಲ್ಲೇಶ್ವರದಲ್ಲಿ ನಿರ್ಮಿಸಿರುವ ಹೈಟೆಕ್ ಡಯಾಗ್ನಾಸ್ಟಿಕ್ ಸೇವೆಗಳ ಎಕ್ಸ್‌ಪ್ರೆಸ್‌ ಕ್ಲಿನಿಕ್, ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎಸ್ಕಲೇಟರ್ ಸಹಿತ ಪಾದಚಾರಿ ಮಾರ್ಗವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಮಲ್ಲೇಶ್ವರದ ಈ ಮಾದರಿ ಕ್ಲಿನಿಕ್ ದೇಶ ಮತ್ತು ರಾಜ್ಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ಈ ವರ್ಷ ನಗರದಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ನಗರದ 243 ವಾರ್ಡ್‌ಗಳಲ್ಲೂ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು’ ಎಂದರು.

‘ಜಯದೇವ ಆಸ್ಪತ್ರೆಯ ನಾಲ್ಕು ಕೇಂದ್ರಗಳನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಇವುಗಳ ಪೈಕಿ 50 ಹಾಸಿಗೆಗಳ ಒಂದು ಕೇಂದ್ರವು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿದೆ. ಸದ್ಯದಲ್ಲೇ ಚಾಲನೆ ನೀಡಲಾಗುವುದು’ ಎಂದು ಹೇಳಿದರು.

ADVERTISEMENT

ಸಚಿವ ಅಶ್ವತ್ಥನಾರಾಯಣ ಮಾತನಾಡಿ, ಮಲ್ಲೇಶ್ವರಂ ಕ್ಷೇತ್ರದ ಎಲ್ಲ ಏಳು ವಾರ್ಡುಗಳಲ್ಲೂ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಈಗಾಗಲೇ ಸುಬ್ರಹ್ಮಣ್ಯ ನಗರ ಮತ್ತು ಅರಮನೆ ನಗರಗಳಲ್ಲಿ ಇದರ ಕಾಮಗಾರಿ ನಡೆಯುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.