ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಬೈಕ್ ಸವಾರರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲ್ಕೆರೆ ನಿವಾಸಿ ಮುರುಗನ್(33), ದೊಡ್ಡ ಬಾಣಸವಾಡಿ ನಿವಾಸಿ ಅನಿಲ್ ಕುಮಾರ್(31) ಮತ್ತು ಕಲ್ಕೆರೆ ನಿವಾಸಿ ತೇಜಸ್(25) ಬಂಧಿತರು.
ಆರೋಪಿಗಳಿಂದ ಮೊಬೈಲ್, 1 ವಾಚ್ ಹಾಗೂ ನಗದು ಜಪ್ತಿ ಮಾಡಲಾಗಿದೆ. ಅವುಗಳ ಮೌಲ್ಯ ಸುಮಾರು ₹ 70 ಸಾವಿರ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 7ರ ತಡರಾತ್ರಿ ದೂರುದಾರರು ತಮ್ಮ ಸ್ನೇಹಿತನ ಜಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಆಗ ಆರೋಪಿಗಳು ಅಡ್ಡಗಟ್ಟಿ ಅವರ ಬಳಿಯಿದ್ದ ವಾಚ್, ಮೊಬೈಲ್ ಮತ್ತು ಫೋನ್ ಪೇ ಮೂಲಕ ₹3,700 ಅನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.
ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.