ADVERTISEMENT

ಗಣೇಶ ಹಬ್ಬಕ್ಕೆ 1,800 ವಿಶೇಷ ಬಸ್

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 20:11 IST
Last Updated 27 ಆಗಸ್ಟ್ 2019, 20:11 IST
   

ಬೆಂಗಳೂರು: ಗೌರಿ– ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 1,800 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಶುಕ್ರವಾರ ಮತ್ತು ಶನಿವಾರ (ಇದೇ 30 ಮತ್ತು 31ರಂದು) ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. ಹೊರ ಜಿಲ್ಲೆಗಳಿಂದ ಸೆ.2ರಂದು ವಾಪಸ್ ಹೊರಡಲಿವೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ತೆರಳಿವೆ.

ADVERTISEMENT

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳುವ ಬಸ್‌ಗಳು ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಹಾಗೂ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕಡೆಗೆ ಹೋಗುವ ಬಸ್‌ಗಳು ಶಾಂತಿನಗರದ ಟಿಟಿಎಂಸಿ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರದಿಂದಲೂ ಬಸ್‌ಗಳು ಹೊರಡಲಿವೆ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.