ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಮೇ 2022, 16:16 IST
Last Updated 29 ಮೇ 2022, 16:16 IST

ಬೆಂಗಳೂರು: ಗೋವಿಂದರಾಜನಗರ ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ಪವಿತ್ರಾ (23) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಪಾವಗಡದ ಪವಿತ್ರಾ, ನಗರದ ಸಂಸ್ಥೆಯೊಂದರಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಪಡೆಯುತ್ತಿದ್ದರು. ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ನೇಹಿತೆಯರ ಜೊತೆ ವಾಸವಿದ್ದರು’ ಎಂದು ಪೊಲೀಸರು ಹೇಳಿದರು.

‘ಭಾನುವಾರ ಮಧ್ಯಾಹ್ನ ಕೊಠಡಿಯಲ್ಲಿ ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಸ್ನೇಹಿತೆಯರಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.