ADVERTISEMENT

ಸಾಮಾಜಿಕ ಮಾಧ್ಯಮ: ಜಯನಗರ ಶಾಸಕರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಂದೇಶ

ದಕ್ಷಿಣ ವಿಭಾಗದ ಸೈಬರ್ ಪೊಲೀಸರಿಂದ ತನಿಖೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 16:23 IST
Last Updated 7 ಜನವರಿ 2026, 16:23 IST
<div class="paragraphs"><p>ಸಾಮಾಜಿಕ ಮಾಧ್ಯಮ&nbsp;</p></div>

ಸಾಮಾಜಿಕ ಮಾಧ್ಯಮ 

   

ಬೆಂಗಳೂರು: ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆ ತೆರೆದು ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದು, ಈ ಸಂಬಂಧ ಬೆಂಗಳೂರು ದಕ್ಷಿಣ ಸೈಬರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸೈಬರ್ ಅಪರಾಧ ಠಾಣೆಯ ಪೊಲೀಸರು ತಿಳಿಸಿದರು.

ADVERTISEMENT

‘ನಕಲಿ ಖಾತೆ ತೆರೆದು ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ. ಹಲವರಿಗೆ ಸಂದೇಶ ಕಳುಹಿಸಿದ್ದಾರೆ. ನನ್ನ ಮೊಬೈಲ್‌ ಹ್ಯಾಕ್‌ ಮಾಡಿರುವ ಸಂಶಯ ಇದೆ’ ಎಂದು ರಾಮಮೂರ್ತಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಾಸಕರ ಹೆಸರಿನಲ್ಲಿದ್ದ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಯುವತಿಗೆ ಹಾಯ್, ಹಲೊ ಗುಡ್ ಮಾರ್ನಿಂಗ್, ರೀಲ್ಸ್ ಸೂಪರ್... ಅಂತಾ ಸಂದೇಶ ರವಾನಿಸಲಾಗಿದೆ. ಈ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

‘ಕ್ಷೇತ್ರದ ಯಾವ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಎಲ್ಲೆಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಲಾಯಿತು ಎಂಬುದನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಖಾತೆ ತೆರೆದಿದ್ದೇನೆ. ಚುನಾವಣೆಯಲ್ಲಿ ಗೆದ್ದ ನಂತರ ನನ್ನ ಹೆಸರಿನಲ್ಲಿದ್ದ ಫೇಸ್‌ಬುಕ್‌ ಹ್ಯಾಕ್ ಆಗಿತ್ತು. ಆಗಲೂ ದೂರು ನೀಡಿದ್ದೆ. ಮತ್ತೆ ಅದೇ ರೀತಿ ಆಗಿದೆ. ನನ್ನ ತೇಜೋವಧೆಗೆ ಕ್ಷೇತ್ರದ ವಿರೋಧ ಪಕ್ಷದ ಕಾರ್ಯಕರ್ತರು ಈ ಕೃತ್ಯ ಮಾಡಿರುವ ಸಾಧ್ಯತೆಯಿದೆ’ ಎಂದು ಸಿ.ಕೆ.ರಾಮಮೂರ್ತಿ ಅವರು ಆರೋಪಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.