ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಜೆ.ಪಿ. ನಗರದ 4ನೇ ಹಂತದಲ್ಲಿರುವ ‘ಬ್ರಾಡ್‌ಕಾಂ’ ಕಂಪನಿ ಕಚೇರಿಯಲ್ಲಿ ಬಾಂಬ್ ಇರಿಸಿರುವುದಾಗಿ ಮಂಗಳವಾರ ಇ–ಮೇಲ್ ಬಂದಿತ್ತು. ಪೊಲೀಸರ ಪರಿಶೀಲನೆ ನಂತರ, ಇದು ಹುಸಿ ಬೆದರಿಕೆ ಎಂಬುದು ಅರಿವಾಯಿತು.
ಬೆಳಿಗ್ಗೆ 11.50ಕ್ಕೆ ಬಂದ ಇ–ಮೇಲ್ ಬಗ್ಗೆ ಕಂಪನಿ ಸಿಬ್ಬಂದಿ, ಪೊಲೀಸರಿಗೆ ವಿಷಯ ತಿಳಿಸಿದರು. ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮೇ ತಿಂಗಳಲ್ಲಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.