ADVERTISEMENT

ಇನ್‌ಸ್ಪೆಕ್ಟರ್‌ ಹೆಸರಿನಲ್ಲಿ ನಕಲಿ ಕಾರ್ಡ್‌: ಆರೋಪಿಯ ಬಂಧನ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2025, 15:35 IST
Last Updated 15 ಮಾರ್ಚ್ 2025, 15:35 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಪೊಲೀಸ್‌ ಇನ್‌ಸ್ಪೆಕ್ಟರ್‌ ಹೆಸರಿನಲ್ಲಿ ನಕಲಿ ಕಾರ್ಡ್ ಮಾಡಿಸಿಕೊಂಡಿದ್ದ ಕೋರಮಂಗಲ ಒಂದನೇ ಬ್ಲಾಕ್‌ನ ಟೀಚರ್ಸ್‌ ಕಾಲೊನಿಯ ನಿವಾಸಿ ಎಸ್‌.ಆನಂದ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಪಶ್ಚಿಮ ವಿಭಾಗದ ಸಿಸಿಬಿಯ ಸಂಘಟಿತ ಅಪರಾಧ ದಳದ ಇನ್‌ಸ್ಪೆಕ್ಟರ್ ಕೆ.ಎಸ್‌.ದೇವೇಂದ್ರಪ್ಪ ಅವರಿಗೆ ಬಂದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಬೆಂಗಳೂರು ನಗರ ಪೊಲೀಸ್‌ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್‌ ಎಂದು ನಕಲಿಯಾಗಿ ಐ.ಡಿ ಕಾರ್ಡ್ ಮಾಡಿಸಿಕೊಂಡಿದ್ದ. ನಕಲಿ ಕಾರ್ಡ್‌ ಅನ್ನು ಆರೋಪಿ ದುರುಪಯೋಗ ಪಡಿಸಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.