ADVERTISEMENT

ಸುಳ್ಳು ಜಾತಿ ಪ್ರಮಾಣ ಪತ್ರ; ಮಾಜಿ ಸದಸ್ಯೆ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 21:42 IST
Last Updated 17 ಡಿಸೆಂಬರ್ 2020, 21:42 IST

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದ ಆರೋಪದಡಿ ಪಾಲಿಕೆಯ ಮಾಜಿ ಸದಸ್ಯೆ ಗಾಯತ್ರಿ ನಾಗರಾಜ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಬೆಂಗಳೂರು ನಗರ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನೀಡಿದ್ದ ಮಾಹಿತಿ ಆಧರಿಸಿ ನಾಗರಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಿದ್ದರು. ಅದರ ವರದಿ ಸಮೇತ ಠಾಣೆಗೆ ದೂರು ನೀಡಿದ್ದಾರೆ. ಗಾಯತ್ರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ತಮ್ಮ ನೈಜ ಜಾತಿ ಮುಚ್ಚಿಟ್ಟಿದ್ದ ಆರೋಪಿ ಗಾಯತ್ರಿ, ಪರಿಶಿಷ್ಟ ಪಂಗಡದ ನಾಯಕ ಸಮುದಾಯದವರೆಂದು ಸುಳ್ಳು ಹೇಳಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದರು. ಪಾಲಿಕೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮಹಿಳಾ ಮೀಸಲಾತಿ ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿಯೂ ಆಯ್ಕೆಯಾಗಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.