
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಕಲಿ ವೈದ್ಯರು ಹಾಗೂ ಅಂತಹ ವೈದ್ಯರನ್ನು ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಕರ್ನಾಟಕ ವೈದ್ಯಕೀಯ ನೋಂದಣಿ ಕಾಯ್ದೆ 1961ರ ಪ್ರಕಾರ ನೋಂದಣಿಯಾಗದಿರುವುದು ಸೇರಿ ವಿವಿಧ ನಿಯಮಗಳನ್ನು ಉಲ್ಲಂಘಿಸಿ, ಕಾರ್ಯನಿರ್ವಹಿಸುತ್ತಿರುವವರ ಮೇಲೆ ಕ್ರಮ ಜರುಗಿಸಬೇಕಿದೆ. ಕಾನೂನಿನಡಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಮರುಕಳಿಸುವ ತಪ್ಪುಗಳಿಗೆ ಕಾನೂನಿನಡಿ ₹ 5 ಲಕ್ಷ ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜಿಲ್ಲಾಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯು ನಕಲಿ ವೈದ್ಯರು ಹಾಗೂ ಅಂತಹ ವೈದ್ಯರನ್ನು ನೇಮಿಸಿಕೊಳ್ಳುವ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.