ಪೊಲೀಸ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಚಿತ್ರ ನಿರ್ದೇಶಕ ಎಸ್.ನಾರಾಯಣ್ ಅವರ ಹೆಸರು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.
ಈ ಸಂಬಂಧ ನಾರಾಯಣ್ ಅವರು ಬುಧವಾರ ನಗರ ಪೊಲೀಸ್ ಕಮಿಷನರ್ ಸೀಮಂತ್‌ಕುಮಾರ್ ಸಿಂಗ್ ಅವರಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದರು.
‘ನಟರಾದ ಶಿವರಾಜ್ಕುಮಾರ್, ಸುದೀಪ್ ಸೇರಿದಂತೆ ಹಲವು ನಟರನ್ನು ಗುರಿಯಾಗಿಸಿ, ನಾನು ಪೋಸ್ಟ್ ಮಾಡಿರುವಂತೆ ಅವಹೇಳಕಾರಿಯಾಗಿ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ನನ್ನ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಖಾತೆ ಇಲ್ಲ. ಆದರೂ ಕಿಡಿಗೇಡಿಗಳು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ನಟರಿಗೆ ತೇಜೋವಧೆ ಆಗುವ ರೀತಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಆರು ತಿಂಗಳಿಂದ ಅಸಭ್ಯವಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಆ ವಿಷಯ ನನಗೆ ತಿಳಿದಿರಲಿಲ್ಲ. ಈಗ ವಿಷಯ ಗೊತ್ತಾಗಿ ದೂರು ನೀಡಿದ್ದೇನೆ’ ಎಂದು ನಾರಾಯಣ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.