ADVERTISEMENT

ಬೆಂಗಳೂರು: ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 14:37 IST
Last Updated 16 ಫೆಬ್ರುವರಿ 2026, 14:37 IST
<div class="paragraphs"><p>ಸೀಮಾಂತ್ ಕುಮಾರ್ ಸಿಂಗ್</p></div>

ಸೀಮಾಂತ್ ಕುಮಾರ್ ಸಿಂಗ್

   

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಆರೋಪಕ್ಕೆ ಸಂಬಂಧಿಸಿ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶ್ರೀಶೈಲ್ ಬಾಗಲೂರ ಭೀಮರಾಯ್ ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ADVERTISEMENT

ಸೀಮಾಂತ್ ಕುಮಾರ್ ಸಿಂಗ್‌ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಪ್ರೊಫೈಲ್ ಸೃಷ್ಟಿಸಿದ್ದ ವಂಚಕರು, ಗಣ್ಯರ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರದ್ದೇ ಅಸಲಿ ಖಾತೆಯೆಂದು ಸಾಕಷ್ಟು‌ ಜನ ಪ್ರತಿಕ್ರಿಯಿಸುತ್ತಿದ್ದು, ವಂಚನೆಯ ಮೂಲಕ ಹಣ ಪಡೆದಿರುವ ಬಗ್ಗೆ ದೂರುಗಳು ಬರಲಾರಂಭಿಸಿವೆ. ಆದ್ದರಿಂದ ನಕಲಿ ಖಾತೆ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.