ADVERTISEMENT

ವಿದೇಶದಲ್ಲಿ ಕೆಲಸದ ಆಮಿಷ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 19:38 IST
Last Updated 16 ಆಗಸ್ಟ್ 2019, 19:38 IST
   

ಬೆಂಗಳೂರು: ರಷ್ಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿಪ್ರದೀಪ್ (45) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಪ್ರದೀಪ್, ರಾಜಾಜಿನಗರದಲ್ಲಿ ‘ಸಿ ವರ್ಲ್ಡ್’ ಎಂಬ ಕಂಪನಿ ತೆರೆದಿದ್ದ. ಅದರ ಹೆಸರಿನಲ್ಲಿ ಜಾಹೀರಾತುಗಳನ್ನು ನೀಡಿ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸಿ ವಂಚಿಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿಯು ನೀಡಿದ್ದ ಜಾಹೀರಾತು ಗಮನಿಸಿ ಅನುಮಾನಗೊಂಡಿದ್ದ ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದ ತಂಡ, ರಾಜಾಜಿನಗರದ ಕಚೇರಿ ಮೇಲೆ ದಾಳಿ ಮಾಡಿತ್ತು. ಆ ಕಂಪನಿಯು ನಕಲಿ ಎಂಬುದು ಗೊತ್ತಾಗಿತ್ತು. ಕೆಲ ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡದಿಂದ ಮೂರು ಲಕ್ಷ ಪಡೆದಿರುವ ಮಾಹಿತಿ ಇದೆ. ಆರೋಪಿ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಕಂಪನಿಗಳ ಬಗ್ಗೆ ಎಚ್ಚರ’: ‘ಉದ್ಯೋಗದ ಆಮಿಷವೊಡ್ಡುವ ಕಂಪನಿಗಳು, ಹಣ ಪಡೆದು ವಂಚಿಸುತ್ತಿವೆ. ಅಂಥ ಕಂಪನಿಗಳ ಬಗ್ಗೆ ಎಚ್ಚರ ವಹಿಸಿ’ ಎಂದು ಸಿಸಿಬಿಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ ಪಾಟೀಲ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.