ADVERTISEMENT

ಬೆಂಗಳೂರು | ನಟಿಗೆ ಲೈಂಗಿಕ ಕಿರುಕುಳ: ನಕಲಿ ನಿರ್ಮಾಪಕ ಬಂಧನ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 15:51 IST
Last Updated 6 ಅಕ್ಟೋಬರ್ 2025, 15:51 IST
ಹೇಮಂತ್‌ಕುಮಾರ್‌ 
ಹೇಮಂತ್‌ಕುಮಾರ್‌    

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ನಕಲಿ ನಿರ್ಮಾಪಕರೊಬ್ಬರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್‌ (34) ಬಂಧಿತ ಆರೋಪಿ.

ಕಿರುತೆರೆ ನಟಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಕಿರುತೆರೆಯಲ್ಲಿ ನಟಿಸುತ್ತಿರುವ ನಟಿಗೆ 2022ರಲ್ಲಿ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಆರೋಪಿ ಪರಿಚಯವಾಗಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

‘ರಿಚ್ಚಿ ಹೆಸರಿನ ಸಿನಿಮಾ ಮಾಡುತ್ತಿದ್ದು, ಅದರಲ್ಲಿ ನೀವು ನಾಯಕಿಯಾಗಿ ನಟಿಸಬೇಕು ಎಂದು ಹೇಮಂತ್ ಅವರು ನಟಿಯನ್ನು ಕೋರಿದ್ದರು. ಅದಕ್ಕೆ ನಟಿ ಒಪ್ಪಿದ್ದರು. ₹2 ಲಕ್ಷ ಸಂಭಾವನೆ ನೀಡುವುದಾಗಿ ಮಾತುಕತೆ ನಡೆದಿತ್ತು. ಮುಂಗಡವಾಗಿ ನಟಿಗೆ ₹60 ಸಾವಿರ ಕೊಡಲಾಗಿತ್ತು. ಅದರಂತೆ ಚಿತ್ರೀಕರಣ ಆರಂಭವಾಗಿತ್ತು. ಆದರೆ, ಕಾರಣಾಂತರಗಳಿಂದ ಆರೋಪಿ ಸಿನಿಮಾ ಚಿತ್ರೀಕರಣವನ್ನು ಮುಂದೂಡಿದ್ದರು. ಚಿತ್ರೀಕರಣದ ಅವಧಿಯಲ್ಲಿ ಆರೋ‍ಪಿ ಅಸಭ್ಯ ರೀತಿಯಲ್ಲಿ ಸ್ಪರ್ಶಿಸುತ್ತಿದ್ದರು’ ಎಂದು ದೂರು ನೀಡಲಾಗಿದೆ. 

‘ಬೇರೆ ಕಡೆ ಸಿನಿಮಾ ಪ್ರಚಾರಕ್ಕೆ ಒಬ್ಬಳೇ ಬರುವಂತೆ ಹೇಳುತ್ತಿದ್ದರು. ಅದಕ್ಕೆ ನಿರಾಕರಿಸಿದಾಗ, ನನ್ನ ಹಿಂದೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿದ್ದಾರೆ’ ಎಂದು ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.