ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರಿನಲ್ಲಿ ಟ್ವಿಟರ್‌ನಲ್ಲಿ ನಕಲಿ ಖಾತೆ ಸೃಷ್ಟಿಸಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈ ಪೊಲೀಸರಿಗೆ ದೂರು ನೀಡಿರುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದುರುದ್ದೇಶದಿಂದ ನನ್ನ ಹೆಸರಿನ ನಕಲಿ ಖಾತೆ ಸೃಷ್ಟಿಸಲಾಗಿದೆ. ಸುಳ್ಳು ಮಾಹಿತಿ ಹಾಗೂ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.