ADVERTISEMENT

ಉಗ್ರರ ನುಸುಳಿಕೆ ಕರೆ: ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಹೆಚ್ಚಿದ ತಪಾಸಣೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 7:00 IST
Last Updated 27 ಏಪ್ರಿಲ್ 2019, 7:00 IST
ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಯಿತು
ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಯಿತು   

ಬೆಂಗಳೂರು: ರಾಜ್ಯಕ್ಕೆ ಉಗ್ರರು ನುಸುಳಿದ್ದಾರೆ ಎಂದು ವ್ಯಕ್ತಿಯೊಬ್ಬರು ಕರೆ ಮಾಡಿದ್ದ ಹಿನ್ನಲೆಯಲ್ಲಿ ರಾಜಧಾನಿಯಲ್ಲಿಕಟ್ಟೆಚ್ಚರ ವಹಿಸಲಾಗಿದೆ.

ನಗರದಲ್ಲಿನ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಾದ ಕೆಂಪೇಗೌಡ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಶನಿವಾರ ಬೆಳಿಗ್ಗೆ ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ.

ಎಲ್ಲಾ ಜಿಲ್ಲಾಧಿಗಳು ಮತ್ತು ಭದ್ರತಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದ್ದು, ಪ್ರತಿ ಗಂಟೆಗೊಮ್ಮೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ವರದಿ ನೀಡಲು ತಿಳಿಸಲಾಗಿದೆ.

ಶುಕ್ರವಾರ ಸಂಜೆ ಬೆಂಗಳೂರು ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ವ್ಯಕ್ತಿ’ನಾನು ಹೊಸೂರಿನ ನಿವಾಸಿ ಆಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಉಗ್ರರ ಬಗ್ಗೆ ಖಚಿತ‌ ಮಾಹಿತಿ ಇದೆ. ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ ಹಾಗೂ ಹಲವು ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ' ಎಂದು ಹೇಳಿದ್ದನು.

ನಿಯಂತ್ರಣ ಕೊಠಡಿಗೆ ಬಂದ ಮೊಬೈಲ್ ಕರೆ ಲೊಕೇಶನ್‌ ಆಧರಿಸಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದ್ದು, ಹುಸಿ ಕರೆ ಮಾಡಿದ್ದ ಆರೋಪದಡಿ ಮಾಜಿ ಸೈನಿಕ ಸುಂದರಮೂರ್ತಿ ಎಂಬುವರನ್ನು ಅವಲಹಳ್ಳಿ ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

ಹೀಗೆ ಬಂದ ಕರೆಯ ಆಧಾರದ ಮೇಲೆರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರುನೆರೆ ರಾಜ್ಯಗಳಿಗೆ ಕಳುಹಿಸಿದ್ದ ತುರ್ತು ಸಂದೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.