ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸುತ್ತಿರುವ ಸುಳ್ಳು ಪ್ರಕರಣಗಳನ್ನು ಕೂಡಲೇ ಹಿಂಪಡೆದುಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷದ್ ಅಧ್ಯಕ್ಷ ದೀಪಕ್ ರಾಜ್‌ಗೋಪಾಲ್, ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ, ‘ಹಿಂದೂ ಧರ್ಮದ ಸಂಸ್ಕೃತಿಯನ್ನು ರಕ್ಷಣೆ ಮಾಡುತ್ತಿರುವ ಹಿಂದೂ ಕಾರ್ಯಕರ್ತರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಪೊಲೀಸರ ಮೂಲಕ ದೌರ್ಜನ್ಯ ಮಾಡುತ್ತಿರುವುದು ಖಂಡನೀಯ. ಅಲ್ಪಸಂಖ್ಯಾತರ ಪರವಾಗಿರುವ ಸರ್ಕಾರ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದರು.
‘ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರದ್ಧವಾಗಿದೆ. ಇದು ಕೇವಲ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಅಲ್ಲ, ಇದು ನಮ್ಮ ಧರ್ಮ, ಸಂಸ್ಕೃತಿಯ ಮೇಲಿನ ದಾಳಿಯಾಗಿದೆ. ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.